ವಿಜಯಪುರ : ಈ ಸಲ ಮೋದಿ ಮುಖ ನೋಡಿ ಮತ ಹಾಕುವ ಪ್ರಸಂಗ ಬರಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆ ಬುಧವಾರ ನಡೆದ #ಚಡಚಣ ಬ್ಲಾಕ್ ನ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಭ್ರಷ್ಟಾಚಾರಕ್ಕೆ ಹೊಸ ಭಾಷ್ಯ ಬರೆದವರು ಮಾನ್ಯ ಮೋದಿ! ಇವರ ಮುಖವಾಡವೀಗ ಕಳಚಿ ಬಿದ್ದಿದೆ. ಮೋದಿ ಬಂದ ಮೇಲೆ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವವರಿಗೆ ಏನು ಹೇಳುವುದು? ಇವರು ಬರುವ ಮುಂಚೆಯೇ ದೇಶ ಕಟ್ಟಿದ್ದು ಕಾಂಗ್ರೆಸ್.
ಸದ್ಯ ಬದಲಾವಣೆ ಕಾಲವಾಗಿದ್ದು, ಸಾರ್ವಜನಿಕರು ಕಾಂಗ್ರೆಸ್ ಗೆ ಮತ ನೀಡಿದರೆ ದೇಶದಲ್ಲೂ #ಗ್ಯಾರಂಟಿ ಗಳ ಪರ್ವ ಆರಂಭವಾಗಲಿದೆ ಎಂದರು.
ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, ಇದೊಂದು ಬಾರಿ ತಮಗೆ ಅವಕಾಶ ನೀಡಿದರೆ ಜಿಲ್ಲೆ ಹಿಂದೆಂದೂ ಕಾಣದ ರೀತಿ ಅಭಿವೃದ್ಧಿಗೆ ಶ್ರಮಿಸುವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಾಬುಗೌಡ ಪಾಟೀಲ, ವಿಶ್ವನಾಥ ಧೋತ್ರೆ ಸೇರಿದಂತೆ ಹಲವರು ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು.
ಶಾಸಕರಾದ ವಿಠ್ಠಲ ಕಟಕಧೋಂಡ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಕಾಂತಾ ನಾಯಕ, ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ, ಪ್ರಮುಖರಾದ ಶ್ರೀಮತಿ ದಾನಮ್ಮಗೌಡತಿ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.