ಪ್ರತಿದಿನ ಜಿಮ್‌ನಲ್ಲಿ ಕಸರತ್ತು ಮಾಡ್ತಾ ಇದ್ರೆ ಅಂಥವರು ಹಸಿ ತರಕಾರಿ, ಹಣ್ಣುಗಳನ್ನು ಸೇವನೆ ಮಾಡುವಂತೆ ಸಲಹೆ ನೀಡಲಾಗುತ್ತದೆ. ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ ಕೆಲವೊಂದು ತರಕಾರಿಗಳು ಮತ್ತು ಹಣ್ಣುಗಳನ್ನು ಹಸಿಯಾಗಿ ತಿನ್ನುವುದರಿಂದ ನಮಗೆ ಹಾನಿಯಾಗುತ್ತದೆ. ಅನೇಕ ರೀತಿಯ ಕಾಯಿಲೆಗಳಿಗೆ ತುತ್ತಾಗುವ ಅಪಾಯವಿರುತ್ತದೆ. ಕೆಲವು ಹಸಿ ತರಕಾರಿಗಳು ನಮ್ಮ ಜೀರ್ಣಕ್ರಿಯೆಯ ಮೇಲೆ ಆಳವಾದ ಪರಿಣಾಮವನ್ನು ಬೀರುತ್ತವೆ.
ಹೂಕೋಸು ಮತ್ತು ಬ್ರೊಕೊಲಿಯನ್ನು ಹಸಿಯಾಗಿ ಸೇವಿಸುವುದರಿಂದ ಹೊಟ್ಟೆಯಲ್ಲಿ ಗ್ಯಾಸ್ ಉಂಟಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಗ್ಯಾಸ್‌ನಿಂದ ಪಾರಾಗಲು ಅನೇಕ ರೀತಿಯ ಔಷಧಗಳನ್ನೂ ನಾವು ಬಳಕೆ ಮಾಡುತ್ತೇವೆ. ಹೂಕೋಸು ಮತ್ತು ಬ್ರೊಕೊಲಿ ಸಸ್ಯ ಆಧಾರಿತ ಆಹಾರಗಳು. ಇದರಲ್ಲಿ ನಾರಿನಂಶ ಹೆಚ್ಚಿನ ಪ್ರಮಾಣದಲ್ಲಿರುತ್ತದೆ.
ಸೆಲ್ಯುಲೋಸ್ ಎಂಬ ವಸ್ತುವು ಅದರಲ್ಲಿ ಕಂಡುಬರುತ್ತದೆ. ಇದನ್ನು ಮಾನವರು ಉತ್ಪಾದಿಸಲು ಸಾಧ್ಯವಿಲ್ಲ. ನಾವು ಅವುಗಳನ್ನು ಹಸಿಯಾಗಿ ಸೇವಿಸಿದಾಗ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತವೆ. ಅದರಿಂದ್ಲೇ ಗ್ಯಾಸ್ ಸಮಸ್ಯೆ ಶುರುವಾಗುತ್ತದೆ. ಅಣಬೆಯನ್ನು ಕೂಡ ಹಸಿಯಾಗಿ ತಿನ್ನಬೇಡಿ. ಅಣಬೆಯಲ್ಲಿರುವ ಪೋಷಕಾಂಶಗಳನ್ನೆಲ್ಲ ಪಡೆಯಲು ಅದನ್ನು ಬೇಯಿಸಿ ತಿನ್ನಬೇಕು. ಅಣಬೆಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
ಆದರೆ ಈ ತರಕಾರಿಯನ್ನು ಹಸಿಯಾಗಿ ಸೇವಿಸಿದರೆ ಅದು ಆರೋಗ್ಯಕ್ಕೆ ಹಾನಿಕಾರಕವೆಂದು ಸಾಬೀತಾಗುತ್ತದೆ. ಅನೇಕರು ಇದನ್ನು ಸಲಾಡ್ ರೂಪದಲ್ಲಿ ಹಸಿಯಾಗಿ ತಿನ್ನುತ್ತಾರೆ. ಅವರಿಗೆ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳಾಗಬಹುದು. ಅತಿಸಾರ, ಹೊಟ್ಟೆ ನೋವು, ವಾಂತಿ ಮತ್ತು ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹಸಿಯಾಗಿ ತಿಂದರೆ ಕ್ಲಸ್ಟರ್ ಬೀನ್ಸ್ ಕೂಡ ಆರೋಗ್ಯಕ್ಕೆ ಹಾನಿಕರ. ಇದನ್ನು ಅತಿಯಾಗಿ ಸೇವಿಸುವುದರಿಂದಲೂ ಹೊಟ್ಟೆಯ ಸಮಸ್ಯೆ ಉಂಟಾಗುತ್ತದೆ. ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದೆ. ಹಾಗಾಗಿ ಹೊಟ್ಟೆ ಉಬ್ಬರಿಸುವುದು, ಸೆಳೆತ, ಅತಿಸಾರದ ಸಮಸ್ಯೆ ಉಂಟಾಗಬಹುದು.