ಪುಟ್ಟ ಬಾಲಕಿಯೊಬ್ಬಳು ತನ್ನ ತಂದೆಯೊಂದಿಗೆ ಡ್ಯಾನ್ಸ್ ಮಾಡಿರುವ ಮುದ್ದಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತಂದೆ-ಮಗಳ ಜೋಡಿಯು ಕ್ಯಾಮಿಲಾ ಕ್ಯಾಬೆಲ್ಲೊ ಅವರ ಹಿಟ್ ಹಾಡು ‘ಡೋಂಟ್ ಗೋ ಯೆಟ್’ ಹಾಡಿಗೆ ನೃತ್ಯ ಮಾಡಿದ್ದಾರೆ.
ಪ್ಯಾಬ್ಲೋ ಎಂಬುವವರು ಮತ್ತು ಅವರ ಪುತ್ರಿ ವೆರೋನಿಕಾ ಆಗಾಗ್ಗೆ ತಮ್ಮ ನೃತ್ಯದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ‘ಡೋಂಟ್ ಗೋ ಯೆಟ್’ ಹಾಡಿಗೆ ಅದ್ಭುತವಾಗಿ ಹೆಜ್ಜೆ ಹಾಕಿದ್ದಾರೆ.
ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಕೆಲವು ವಾರಗಳ ಹಿಂದೆ ಪೋಸ್ಟ್ ಮಾಡಿದ್ದು, ಇದು 1 ಮಿಲಿಯನ್ ವೀಕ್ಷಣೆಗಳೊಂದಿಗೆ ವೈರಲ್ ಆಗಿದೆ.
ಡೋಂಟ್ ಗೋ ಯೆಟ್ ಹಾಡಿಗೆ ತಂದೆ-ಮಗಳು ಬಾತ್ರೂಮ್ನಲ್ಲಿ ನೃತ್ಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವೆರೋನಿಕಾ ಮೇಲೆ ನಿಂತು ನೃತ್ಯ ಮಾಡುತ್ತಿದ್ರೆ, ಪ್ಯಾಬ್ಲೋ ನೆಲದ ಮೇಲೆ ನಿಂತು ಸ್ಟೆಪ್ಸ್ ಹಾಕಿದ್ದಾರೆ. ಇಬ್ಬರೂ ಕೂಡ ಕನ್ನಡಿ ನೋಡಿಕೊಂಡು ಅದ್ಭುತವಾಗಿ ಕುಣಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತಂದೆ-ಮಗಳ ನೃತ್ಯವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.
https://www.youtube.com/watch?v=FjN1VcO8xWM