ಕಾಶಿಯಾತ್ರೆಗೆ ತೆರಳುವವರಿಗೆ 5,000 ರೂ. ಸಹಾಯಧನ : ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್

ಬೆಂಗಳೂರು : ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳು ಕಾಶಿ ವಿಶ್ವನಾಥ ದೇವಸ್ಥಾನದ 5 ಕಿಮೀ  ವ್ಯಾಪ್ತಿಯೊಳಗೆ ಜಿಯೋಟ್ಯಾಗ್ ಸೆಲ್ಫಿ ತೆಗೆದುಕೊಂಡು, ಅದನ್ನು ಸರ್ಕಾರದ ಅಪ್ಲಿಕೇಶನ್ ಅಥವಾ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವಂತೆ ಸೂಚನೆ ನೀಡಲಾಗಿದೆ. 

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಕಾಶಿ ಕಾರಿಡಾರ್​ ಅನ್ನು ಉತ್ತೇಜಿಸುವ ನಿಟ್ಟಿನಲ್ಲಿ 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ‘ಕಾಶಿ ಯಾತ್ರೆ’ ಯೋಜನೆ ಅಡಿಯಲ್ಲಿ ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯಧನ ನೀಡಲು ಆರಂಭಿಸಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

ಯಾತ್ರಾರ್ಥಿಗಳು ಸಹಾಯಧನ ಪಡೆಯಲು ಕಾಶಿ ಶ್ರೀ ವಿಶ್ವನಾಥ ಸ್ವಾಮಿ ದೇವಾಲಯಕ್ಕೆ ತೆರಳಲು ಮುಂಗಡವಾಗಿ ಕಾಯ್ದಿರಿಸಿದ ಟಿಕೆಟ್‌, ಹಿಂದಿರುಗಿದ ಬಗ್ಗೆ ಕಾಯ್ದಿರಿಸಿದ ಟಿಕೇಟ್ , ಫೋಟೋ, ಪೂಜಾ ರಶೀದಿ, ಅಥವಾ ದೇವಾಲಯಕ್ಕೆ ತೆರಳಿ ಮರಳಿದ ಬಗ್ಗೆ ಯಾವುದಾದರೂ  ದಾಖಲೆ ಮತ್ತು ವೋಟರ್ ಐಡಿ ಅಥವಾ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್  ಮುಜರಾಯಿ ಇಲಾಖೆಯ ಅಪ್ಲಿಕೇಶನ್ ಅಥವಾ ಪೋರ್ಟಲ್ ನಲ್ಲಿ  ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ (ಏಪ್ರಿಲ್‌ 1 ಕ್ಕೆ) 18 ವರ್ಷ ಪೂರ್ಣಗೊಂಡಿರಬೇಕು ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read