alex Certify `ಅನ್ನಭಾಗ್ಯ’ ಯೋಜನೆಯ ಹಣ ಬಾರದೆ ಇರುವವರು ತಪ್ಪದೇ ಈ ಕೆಲಸ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`ಅನ್ನಭಾಗ್ಯ’ ಯೋಜನೆಯ ಹಣ ಬಾರದೆ ಇರುವವರು ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಈವರೆಗೆ ಹಣ ಬಾರದೆ ಇರುವ ಫಲಾನುಭವಿಗಳಿಗೆ ತಪ್ಪದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಆಹಾರ ಇಲಾಖೆ ತಿಳಿಸಿದೆ.

ಸರ್ಕಾರದ  ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.

ರಾಷ್ಟ್ರೀಯ  ಆಹಾರ ಭದ್ರತಾ ಕಾಯ್ದೆಯಡಿ ನ ಪಡಿತರ ಚೀಟಿದಾರರಿಗೆ  ನವಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...