ಮಧ್ಯಾಹ್ನದ ಊಟ ಅಥವಾ ರಾತ್ರಿಯ ಊಟಕ್ಕೆ ಕೆಲವರು ರೊಟ್ಟಿ ಮತ್ತು ಅನ್ನವನ್ನು ಒಟ್ಟಿಗೆ ತಿನ್ನುತ್ತಾರೆ. ಇದರಿಂದ ಆರೋಗ್ಯದ ಮೇಲೆ ಬಹಳ ಪರಿಣಾಮ ಬೀರಲಿದೆ. ಇದರಿಂದ ಏನೆಲ್ಲಾ ಸಮಸ್ಯೆಗಳು ಸಂಭವಿಸುತ್ತವೆ ಎಂಬುದನ್ನು ಮೊದಲು ತಿಳಿಯಿರಿ.
ಇದರಿಂದ ಕ್ಯಾಲೋರಿ ಹೆಚ್ಚಾಗುತ್ತದೆ. ಹೊಟ್ಟೆ ಭಾರವೆನಿಸುತ್ತದೆ. ರಾತ್ರಿ ಚೆನ್ನಾಗಿ ನಿದ್ರೆ ಬರುವುದಿಲ್ಲ. ಇದರಿಂದ ಬೊಜ್ಜು ಕೂಡ ಹೆಚ್ಚಾಗುತ್ತದೆ. ಹಾಗಾಗಿ ರೊಟ್ಟಿ ಅಥವಾ ಅನ್ನ ಯಾವುದಾದರು ಒಂದನ್ನು ಸೇವಿಸಿ.
ಕೆಲವರು ರೊಟ್ಟಿ ಸೇವಿಸಿದ ಬಳಿಕ ಹೆಚ್ಚಿನ ಪ್ರಮಾಣದಲ್ಲಿ ಅನ್ನ ಸೇವಿಸುತ್ತಾರೆ. ಇದು ಅಜೀರ್ಣ ಮತ್ತು ಗ್ಯಾಸ್ ಸಮಸ್ಯೆಗೆ ಕಾರಣವಾಗುತ್ತದೆ.
ಇವೆರಡನ್ನು ಒಟ್ಟಿಗೆ ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆ ಕಾಡುತ್ತದೆ. ರಾತ್ರಿ ಜೀರ್ಣಕ್ರಿಯೆ ನಿಧಾನವಾಗುವುದರಿಂದ ಇದು ಸುಲಭವಾಗಿ ಜೀರ್ಣವಾಗುವುದಿಲ್ಲ. ಇದರಿಂದ ಹೊಟ್ಟೆ ನೋವು ಉಂಟಾಗಬಹುದು.
ರೊಟ್ಟಿ ಮತ್ತು ಅನ್ನವನ್ನು ಒಟ್ಟಿಗೆ ಸೇವಿಸಿದರೆ ನಿಮ್ಮ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುತ್ತದೆ. ಇದು ಹೃದಯ ಮತ್ತು ಮೂತ್ರಪಿಂಡದ ಸಮಸ್ಯೆಗೆ ಕಾರಣವಾಗಬಹುದು.