ಬೆಂಗಳೂರು : ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, 15 ದಿನದೊಳಗೆ APL, BPL ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಪ್ರಯುಕ್ತ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ನೀಡುವುದನ್ನು ನಿಲ್ಲಿಸಲಾಗಿತ್ತು. ರಾಜ್ಯದಲ್ಲಿ2.95 ಅರ್ಜಿಗಳು ಬಾಕಿಯಿದ್ದು, ಜಿಲ್ಲೆಯಲ್ಲಿ 12 ಸಾವಿರ ಅರ್ಜಿಗಳು ಬಂದಿವೆ. 15 ದಿನದೊಳಗೆ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವಂತೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.
ಇದೇ ವೇಳೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಲಾಗಿದೆ. . ಸಾಮಾಜಿಕ ನ್ಯಾಯ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಜಾತಿ ಗಣತಿ ನಡೆಸಲಾಗುತ್ತಿದೆ. ಇದರಿಂದ ಯಾವುದೇ ಸಮಾಜಕ್ಕೆ ಅನ್ಯಾಯ ಆಗಲ್ಲ ಎಂದರು.