ಬೆಂಗಳೂರು : ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಒಳಗಾದವರು ಪೊಲೀಸರಿಗೆ ದೂರು ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘’ಮೈಕ್ರೋ ಫೈನಾನ್ಸ್ ಕಂಪೆನಿಗಳು ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ “ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ – 2025” ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ. ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ. ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ’’ ಎಂಬ ಭರವಸೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ “ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ… pic.twitter.com/YO4Fek3XT7
— Siddaramaiah (@siddaramaiah) February 12, 2025