ಬೆಂಗಳೂರು: ಬೆಂಗಳೂರಿನ ಟಿಸಿಎಸ್ ಕಂಪನಿಗೆ ಬೆದರಿಕೆ ಕರೆ ಮಾಡಿದ್ದ ಯುವತಿ ವಿಚಾರಣೆಗೆ ನೋಟಿಸ್ ಜಾರಿ ಮಾಡಲಾಗಿದೆ.
ಇಂದು ಪರಪ್ಪನ ಅಗ್ರಹಾರ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಬೆದರಿಕೆ ಕರೆ ಮಾಡಿದ್ದ ಶ್ರುತಿ ಮತ್ತು ಅವರ ತಂದೆ, ತಾಯಿಗೆ ಠಾಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬೆಳಗಾವಿಯ ಶಾಹೂನಗರದ ಶೃತಿ ಶೆಟ್ಟಿ ಅವರಿಗೆ ನೋಟಿಸ್ ನೀಡಿದ್ದಾರೆ.
ನಿನ್ನೆ ಅವರ ವಿಚಾರಣೆ ನಡೆಸಲಾಗಿತ್ತು. ಹುಸಿ ಬಾಂಬ್ ಬೆದರಿಕೆ ಕರೆ ಬಗ್ಗೆ ಪ್ರಾಥಮಿಕ ಮಾಹಿತಿ ಸಂಗ್ರಹಿಸಲಾಗಿತ್ತು. ಎರಡನೇ ಬಾರಿ ಕೆಲಸಕ್ಕೆ ಸೇರಿಸಿಕೊಳ್ಳದ ಕಾರಣ ತಮ್ಮ ತಾಯಿಯ ಮೊಬೈಲ್ ನಿಂದ ಕರೆ ಮಾಡಿರುವುದಾಗಿ ಶ್ರುತಿ ಹೇಳಿದ್ದಾರೆನ್ನಲಾಗಿದ್ದು, ಇಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.