SHOCKING: ಮನೆಗೆ ನುಗ್ಗಿ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಪ್ರೀತಿಸುವಂತೆ ಬಲವಂತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸಿದ್ದಲ್ಲದೆ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದು, ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಬಾಲಕಿಯ ತಂದೆ ಆರು ತಿಂಗಳ ಹಿಂದೆ ಮೃತಪಟ್ಟಿದ್ದಾರೆ. ಸ್ಥಳೀಯ 24 ವರ್ಷದ ಯುವಕ ಪ್ರೀತಿಸುವಂತೆ ಬಾಲಕಿಗೆ ಪೀಡಿಸಿದ್ದಾನೆ. ಶನಿವಾರ ಬೆಳಗ್ಗೆ ಬಾಲಕಿಯ ಮನೆಗೆ ಬಂದ ಆರೋಪಿ ತನ್ನನ್ನು ಮದುವೆಯಾಗಬೇಕು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿದ್ದಾನೆ. ಬಾಲಕಿಯ ತಾಯಿ ಭಯದಿಂದ ಕಿರುಚಾಡುತ್ತಿದ್ದಂತೆ ಆರೋಪಿ ಸ್ಥಳದಿಂದ ತನ್ನ ಆಟೋ ಸಮೇತ ಪರಾರಿಯಾಗಿದ್ದಾನೆ.

ಸಾಗರ ನಗರ ಠಾಣೆಗೆ ದೂರು ನೀಡಲಾಗಿದ್ದು, ವರದಹಳ್ಳಿ ರಸ್ತೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಠಾಣೆ ಎದುರು ಸೇರಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಅನ್ಯಕೋಮಿನ ಯುವಕರು ಹಿಂದೂ ಯುವತಿಯರನ್ನು ವಂಚಿಸುತ್ತಿರುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read