
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸ್ವಾಮೀಜಿ ಹಾಗೂ ಶಾಸಕರಿಗೆ ಬೆದರಿಕೆ ಹಾಕಲಾಗಿದೆ. KSP ಆಪ್ ಮೂಲಕ ಜಿಲ್ಲಾ ಪೊಲೀಸ್ ಕಚೇರಿಗೆ ಸಂದೇಶ ಕಳುಹಿಸಲಾಗಿದೆ.
ಚಿತ್ರದುರ್ಗದ ಬೋವಿಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಶಾಸಕರಾದ ಚಂದ್ರಪ್ಪ, ಗೂಳಿಹಟ್ಟಿ ಶೇಖರ್ ಅವರಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಈ ಕುರಿತು ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರುಶುರಾಮ್ ಮಾಹಿತಿ ನೀಡಿದ್ದಾರೆ.