alex Certify BIG NEWS: ದೇಗುಲ ಮಠದಿಂದ ಮೂವರು ಬಾಲಕರು ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಗುಲ ಮಠದಿಂದ ಮೂವರು ಬಾಲಕರು ನಾಪತ್ತೆ

ರಾಮನಗರ: ಇದ್ದಕ್ಕಿದ್ದಂತೆ ದೇಗುಲ ಮಠದಿಂದ ಮೂವರು ಬಾಲಕರು ನಾಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ನಡೆದಿದೆ.

ಶಿವಕುಮಾರ್ (15), ಪ್ರತಾಪ್ (16), ಕಾರ್ತಿಕ್ (15) ನಾಪತ್ತೆಯಾದ ಬಾಲಕರು. ನ.9ರ ರಾತ್ರಿಯಿಂದ ಮೂವರು ಬಾಲಕರು ಮಠದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ದೇಗುಲ ಮಠದಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕರು ಹಾಸ್ಟೆಲ್ ನಲ್ಲಿ ರಾತ್ರಿ ಊಟದ ಬಳಿಕ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ.

ಮಠದ ಸಿಬ್ಬಂದಿ ಮಹದೇವಸ್ವಾಮಿ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಾಪತ್ತೆಯಾದ ಬಾಲಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...