ತುಮಕೂರು : ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿದೆ.
ತುಮಕೂರು ತಾಲೂಕಿನ ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ತಡರಾತ್ರಿ ಕಾರಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.