alex Certify BIG NEWS: 20 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 20 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಮುಂಬೈ: ಮುಂಬೈನಲ್ಲಿ 20 ಅಂತಸ್ತಿನ ಬೃಹತ್ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮುಂಬೈನ ಟಾರ್ಡಿಯೋದಲ್ಲಿರುವ ನಾನಾ ಚೌಕ್ ನಲ್ಲಿರುವ ಕಮಲಾ ಬಿಲ್ಡಿಂಗ್ ನಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ 18 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. 13 ಅಗ್ನಿಶಾಮಕ ವಾಹನಗಳು, 7 ಜಂಬೋ ಟ್ಯಾಂಕರ್ ಗಳ ಮೂಲಕ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಭಾಟಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...