ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮೂರು ಡಿಸಿಎಂ ಆಯ್ಕೆ ವಿಚಾರ ಭಾರಿ ಚರ್ಚೆಗೆ ಬಂದಿದ್ದು, ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಅಂಗಳಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.
ಈ ನಿಟ್ಟಿನಲ್ಲಿ ಚರ್ಚಿಸಲು ದೆಹಲಿಗೆ ಕಾಂಗ್ರೆಸ್ ನಾಯಕರ ನಿಯೋಗ ಸಧ್ಯದಲ್ಲೇ ಭೇಟಿ ನೀಡಲಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಮೂವರು ಡಿಸಿಎಂ ಆಯ್ಕೆ ಮಾಡುವುದರಿಂದ ಯಾವ ರೀತಿ ಪಕ್ಷಕ್ಕೆ ಲಾಭದಾಯಕವಾಗಲಿದೆ ಎಂಬುದನ್ನು ವರಿಷ್ಠರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಲಾಗುತ್ತಿದೆ.
ಸಮುದಾಯವಾರು ಆಯ್ಕೆ ಬಗ್ಗೆ ನಿರ್ಧಾರ ತಿಳಿಸಲು ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಕೂಡ ಮೂವರು ಡಿಸಿಎಂ ನೇಮಕ ವಿಚಾರವಾಗಿ ಪರೋಕ್ಷವಾಗಿ ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಕರ್ನಾಟಕ ಭಾಗದ ಹಲವು ಶಾಸಕರು ಡಿಸಿಎಂ ಹುದ್ದೆಗೆ ಆಸಕ್ತಿ ಹೊಂದಿದ್ದಾರೆ. ಎಸ್ ಸಿ ಎಸ್ ಟಿ ಸಮುದಾಯ, ಮೇಲ್ವರ್ಗದ ಕೆಲ ನಾಯಕರು ಸೇರಿದಂತೆ ಮೂರು ಡಿಸಿಎಂ ಆಯ್ಕೆ ವಿಚಾರವಾಗಿ ಹಲವು ಲೆಕ್ಕಾಚಾರವನ್ನು ಕಾಂಗ್ರೆಸ್ ನಾಯಕರು ಹೈಕಮಾಂಡ್ ಮುಂದೆ ಇಡಲು ಮುಂದಾಗಿದೆ ಎಂದು ತಿಳಿದುಬಂದಿದೆ.