alex Certify BIG NEWS: ಬೈಕ್ ಗೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಕ್ಯಾಂಟರ್; ಸರಣಿ ಅಪಘಾತದಲ್ಲಿ ಇಬ್ಬರು ಬಲಿ; ಗರ್ಭಿಣಿ ಸೇರಿ ಮೂವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ಗೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಕ್ಯಾಂಟರ್; ಸರಣಿ ಅಪಘಾತದಲ್ಲಿ ಇಬ್ಬರು ಬಲಿ; ಗರ್ಭಿಣಿ ಸೇರಿ ಮೂವರು ಗಂಭೀರ

 

ಚಿಕ್ಕಬಳ್ಳಾಪುರ: ಸರಣಿ ಅಪಘಾತದಲ್ಲಿ ಇಬ್ಬರು ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಬೈಕ್ ಗೆ ಡಿಕ್ಕಿ ಹೊಡೆದ ಕ್ಯಾಂಟರ್ ಹೋಟೆಲ್ ಗೆ ನುಗ್ಗಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮೂವರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಗೆ ಡಿಕ್ಕಿ ಹೊಡೆದ ಕ್ಯಾಂಟರ್ ಬಳಿಕ ಹೋಟೆಲ್ ಬಳಿ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ 5 ಕಾರುಗಳಿಗೆ ಗುದ್ದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಹೋಟೆಲ್ ಒಳಗೆ ನುಗ್ಗಿದೆ.

ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗರ್ಭಿಣಿ, ಸೆಕ್ಯೂರಿಟಿ, ಹಿರಿಯ ನಾಗರಿಕರು ಸೇರಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಜನಾರ್ಧನ, ನಾರಾಯಣಸ್ವಾಮಿ ಎಂದು ಗುರುತಿಸಲಾಗಿದೆ.

.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...