ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ರಸಗೊಬ್ಬರ ಸ್ಥಾವರದಲ್ಲಿ ರಿಯಾಕ್ಟರ್ ಸ್ಫೋಟದಿಂದ ಉಂಟಾದ ಅನಿಲ ಸೋರಿಕೆಯ ನಂತರ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಕ್ಟೋಬರ್ 21 ರ ಗುರುವಾರ ಸಂಜೆ 6:30 ಕ್ಕೆ ಈ ಘಟನೆಯು ಶಾಲ್ಗಾಂವ್ MIDC, ಕಡೆಗಾಂವ್ ತಹಸಿಲ್‌ನಲ್ಲಿರುವ ಮ್ಯಾನ್ಮಾರ್ ಕೆಮಿಕಲ್ ಕಂಪನಿಯಲ್ಲಿ ಸಂಭವಿಸಿದೆ, ಇದರಲ್ಲಿ ರಿಯಾಕ್ಟರ್ ಸ್ಫೋಟದಿಂದ ರಾಸಾಯನಿಕ ಹೊಗೆ ಆವರಿಸಿತ್ತು.
ಘಟನೆಯಿಂದಾಗಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ 12 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಕಾರ್ಮಿಕರು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನಿಲ ಸೋರಿಕೆಯಿಂದಾಗಿ ಘಟಕದಲ್ಲಿದ್ದ 12 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಡೆಗಾಂವ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಗ್ರಾಮ್ ಶೆವಾಲೆ ತಿಳಿಸಿದ್ದಾರೆ.
ತನಿಖೆ ನಡೆಸಿದ ಅಧಿಕಾರಿಗಳು ಸೋರಿಕೆಯಾದ ಅನಿಲ ಅಮೋನಿಯಾ ಎಂದು ಶಂಕಿಸಿದ್ದಾರೆ, ಇದು ವ್ಯಾಪಕ ಹಾನಿಯನ್ನುಂಟುಮಾಡಿದೆ. ಗಾಯಗೊಂಡವರಲ್ಲಿ ಏಳು ಮಂದಿಯನ್ನು ಕರಾದ್‌ನ ಸಹ್ಯಾದ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರನ್ನು ಐಸಿಯುನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.