ತುಮಕೂರು: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಮೂರು ವರ್ಷದ ಮಗು ಸೇರಿ ಮೂವರು ಬುಧವಾರ ಮೃತಪಟ್ಟಿದ್ದಾರೆ.
ಮಧುಗಿರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಮೀನಾಕ್ಷಿ(3), ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕದಾಸಪ್ಪ(76), ಪೆದ್ದಣ್ಣ(74) ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಬಳಿಕ ಮೀನಾಕ್ಷಿಯನ್ನು ಮನೆಗೆ ಕರೆದುಕೊಂಡು ಹೋಗಿದ್ದು, ಮತ್ತೆ ಅಸ್ವಸ್ಥಳಾಗಿದ್ದರಿಂದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯ ಮೃತಪಟ್ಟಿದ್ದಾಳೆ. ಚಿನ್ನೇನಹಳ್ಳಿ ಗ್ರಾಮದ ಓವರ್ ಹೆಡ್ ಟ್ಯಾಂಕ್ ಮತ್ತು ಶುದ್ಧ ನೀರಿನ ಘಟಕದಿಂದ ಪೂರೈಸುವ ನೀರು ಸೇವಿಸಿದ್ದ ಗ್ರಾಮದ 98 ಜನ ಅಸ್ವಸ್ಥರಾಗಿದ್ದು, 59 ಮಂದಿ ಗುಣಮುಖರಾಗಿದ್ದಾರೆ.