ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿ ಖಾಸಗಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು, ಸ್ಥಳೀಯರು ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೈ ಕರ್ನಾಟಕ ಮಾತೆ ಎಂದು ಘೋಷಣೆ ಕೂಗಬೇಕು ಎಂದು ಪಟ್ಟು ಹಿಡಿದಿದ್ದಾರೆ.
ವಿದ್ಯಾರ್ಥಿಗಳ ವಿರುದ್ಧ ಮಾರತ್ ಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಮಾರತ್ ಹಳ್ಳಿ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಮಾಷೆಗಾಗಿ ಘೋಷಣೆ ಕೂಗಿದ್ದಾಗಿ ವಿದ್ಯಾರ್ಥಿಗಳು ಹೇಳಿಕೆ ನೀಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.
ಪಾಕ್ ಪರ ಘೋಷಣೆ ಕೂಗಿ ಸಸ್ಪೆಂಡ್ ಆದವರು ದಾವಣಗೆರೆ ಮೂಲದ ರಿಯಾ, ಪಂಜಾಬ್ ಮೂಲದ ಆರ್ಯನ್, ಆಂಧ್ರಪ್ರದೇಶ ಮೂಲದ ದಿನಕರ್ ಎಂದು ತಿಳಿದುಬಂದಿದೆ.