
ಮಂಗಳೂರು: ಮೂವರು ಮಕ್ಕಳನ್ನು ಕೊಂದ ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪದ್ಮನೂರು ಗ್ರಾಮದ ಬಳಿ ನಡೆದಿದೆ.
ವಿಜೇಶ್ ಶೆಟ್ಟಿಗಾರ ಎಂಬಾತ ಇಂತಹ ಕೃತ್ಯವೆಸಗಿ ವ್ಯಕ್ತಿ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಪದ್ಮನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಕ್ಕಳಾದ ರಶ್ಮಿತಾ(14), ಉದಯ(11), ದಕ್ಷಿತ(4) ಅವರನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿದ ವಿಜೇಶ್ ನಂತರ ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೂವರು ಮಕ್ಕಳನ್ನು ಕೊಂದು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
