alex Certify ಬೈಕ್ ಗೆ ಟ್ರಕ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಟ್ರಕ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನೌಘರ್ ಬಳಿಯ ಜಗದೀಶ್‌ಪುರ-ಮೋಹನ್‌ಗಂಜ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮೃತರನ್ನು ರಾಜ್ ಕುಮಾರ್(26), ಅಮಿತ್ ಕುಮಾರ್(23) ಮತ್ತು ಆಕಾಶ್(25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ.

ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟ್ರಕ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು ಚಾಲಕನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...