alex Certify BREAKING: ಜಾರ್ಖಂಡ್ ನಲ್ಲಿ ಕಲ್ಲಿದ್ದಲು ಗಣಿ ಕುಸಿದು ಮೂವರು ಸಾವು, ಹಲವರು ಸಿಲುಕಿರುವ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಾರ್ಖಂಡ್ ನಲ್ಲಿ ಕಲ್ಲಿದ್ದಲು ಗಣಿ ಕುಸಿದು ಮೂವರು ಸಾವು, ಹಲವರು ಸಿಲುಕಿರುವ ಶಂಕೆ

ರಾಂಚಿ : ಜಾರ್ಖಂಡ್ (Jharkhand) ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅಕ್ರಮವಾಗಿ ನಡೆಸುತ್ತಿದ್ದ ಕಲ್ಲಿದ್ದಲು ಗಣಿ (Coal mine) ಕುಸಿದು ಮೂವರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಧನ್ಬಾದ್ನಿಂದ 21 ಕಿ.ಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ನ (BCCL) ಭೋರಾ ಕಲ್ಲಿದ್ದಲು ಪ್ರದೇಶದಲ್ಲಿ ಬೆಳಿಗ್ಗೆ 10.30 ಕ್ಕೆ ಈ ಘಟನೆ ನಡೆದಿದೆ. ಸ್ಥಳೀಯರ ಸಹಾಯದಿಂದ, ಅವಶೇಷಗಳಿಂದ ಮೂವರನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಪ್ರತ್ಯಕ್ಷದರ್ಶಿ ಹೇಳಿದರು.

ಅವಷೇಶಗಳಡಿ ಹಲವರು ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ನಂತರ ಸಾವುನೋವುಗಳ ನಿಖರ ಸಂಖ್ಯೆ ಗೊತ್ತಾಗಲಿದೆ ಎಂದು ಭೋವ್ರಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿನೋದ್ ಒರಾನ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...