ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಸಾವುಕಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ.
ಆಕಸ್ಮಿಕ ಬೆಂಕಿಯಿಂದಾಗಿ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡು ಭಾರಿ ಅಗ್ನಿ ದುರಂತ ಸಂಭವಿಸಿತ್ತು. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ನಡೆಸಿದ್ದಾರೆ. ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿದ್ದಾರೆ ಎನ್ನಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.