ನವದೆಹಲಿ: ಮೂರು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಆಯ್ಕೆಗಾಗಿ ಮೂರು ರಾಜ್ಯಗಳಿಗೆ ಬಿಜೆಪಿ ವೀಕ್ಷಕರನ್ನು ನೇಮಕ ಮಡಲಾಗಿದೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ವಿಧಾನಸಭ ಅಚುನವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಆಯ್ಕೆಗಾಗಿ ಕಸರತ್ತು ನಡೆದಿದ್ದು, ಸಿಎಂ ಕುರ್ಚಿಗಾಗಿ ಮೂರು ರಾಜ್ಯಗಳಲ್ಲಿ ಘಟಾನುಘಟಿ ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಮೂರು ರಾಜ್ಯಗಳಿಗೆ ಸಿಎಂ ಆಯ್ಕೆಗಾಗಿ ವೀಕ್ಷಕರನ್ನು ನೇಮಕ ಮಾಡಿದೆ.
ರಾಜಸ್ಥಾನ ವೀಕ್ಷಕರಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿನೋದ್ ತಾವಡೆ, ಸರೋಜ್ ಪಾಂಡೆ ನೇಮಕಗೊಂಡಿದ್ದಾರೆ. ಮಧ್ಯಪ್ರದೇಶಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್, ಕೆ.ಲಕ್ಷ್ಮಣ್, ಆಶಾ ಲಾಕ್ರಾ ಅವರನ್ನು ನೇಮಿಸಲಾಗಿದೆ. ಛತ್ತೀಸ್ ಗಢಕ್ಕೆ ಕೇಂದ್ರ ಸಚಿವ ಅರ್ಜುನ್ ಮುಂಡಾ, ಸರ್ಬಾನಂದ್ ಸೋನೋವಾಲ್ ಹಾಗೂ ದುಷ್ಯಂತ್ ಗೌತಮ್ ಅವರನ್ನು ನೇಮಕ ಮಾಡಲಾಗಿದೆ.