alex Certify ಹಾಸ್ಟೆಲ್ ನಲ್ಲಿ ವಿಷಪೂರಿತ ಹಾವು ಕಚ್ಚಿ ಮೂವರು ವಿದ್ಯಾರ್ಥಿಗಳ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲಿ ವಿಷಪೂರಿತ ಹಾವು ಕಚ್ಚಿ ಮೂವರು ವಿದ್ಯಾರ್ಥಿಗಳ ಸಾವು

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಹಾಸ್ಟೆಲ್ ನಲ್ಲಿ ಮಲಗಿದ್ದ ಮಕ್ಕಳಿಗೆ ಹಾವು ಕಚ್ಚಿದೆ. ಇಬ್ಬರು ಬಾಲಕಿಯರು ಸೇರಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಂಪೂವಾ ಬ್ಲಾಕ್ ನಿಶ್ಚಿಂತಪುರ ಗ್ರಾಮದ ಫಟಾಫಟ್ ಕೋಚಿಂಗ್ ಸೆಂಟರ್ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ರಾಜ್ ನಾಯಕ್(12), ಶೇಹಾಶ್ರೀ(10), ಎಲಿನಾ ಮೃತಪಟ್ಟ ಮಕ್ಕಳು. ಮತ್ತೊಬ್ಬ ವಿದ್ಯಾರ್ಥಿ ಆಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆತನನ್ನು ಕಟಕ್ ಎಸ್.ಸಿ.ಬಿ. ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಚಿಂಗ್ ಸೆಂಟರ್ ಹಾಸ್ಟೆಲ್ ನಲ್ಲಿ ಮಕ್ಕಳು ತಂಗಿದ್ದರು. ಶನಿವಾರ ರಾತ್ರಿ ಮಕ್ಕಳು ಮಲಗಿದ್ದ ವೇಳೆ ವಿಷಪೂರಿತ ಹಾವು ಕಚ್ಚಿದೆ. ಇಬ್ಬರು ವಿದ್ಯಾರ್ಥಿನಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಹಾವು ಕಚ್ಚಿದ್ದು, ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ> ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...