ದಾವಣಗೆರೆ : ಚನ್ನಗಿರಿ ಲಾಕಪ್ ಡೆತ್, ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಡಿವೈಎಸ್ಪಿ ಸೇರಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ , ಇನ್ ಸ್ಪೆಕ್ಟರ್ ಬಿ ನಿರಂಜನ್ , ಎಸ್ ಐ ಅಕ್ತರ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಆದಿಲ್ ಎಂಬ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಸಂದರ್ಭದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದರು. ಇದು ಲಾಕಪ್ ಡೆತ್ ಎಂದು ಆರೋಪಿಸಿದ ಮೃತರ ಸಂಬಂಧಿಕರು ಮತ್ತು ಇತರರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳನ್ನು ಹಾನಿಗೊಳಿಸಿದ್ದರು. ಘಟನೆಯಲ್ಲಿ ಅನೇಕ ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.