alex Certify ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ತನಿಖೆಗೆ ಮೂರು ತಂಡ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ತನಿಖೆಗೆ ಮೂರು ತಂಡ ರಚನೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ.

ಡಿ.ವೈ.ಎಸ್.ಪಿ. ಮುರುಳಿ ಅವರ ನೇತೃತ್ವದಲ್ಲಿ ಮೂರು ತಂಡಗಳ ರಚನೆಯಾಗಿದ್ದು, ಕೃತ್ಯದಲ್ಲಿ ಭಾಗಿಯಾದ ಇತರೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳಾದ ಅಶ್ವಿನಿ, ಆನಂದ್, ಶಶಿಕಲಾ, ಖಾಸಗಿ ನರ್ಸಿಂಗ್ ಹೋಂನ ಗಿರಿಜಾಂಬಾ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇವರು ಅಕ್ರಮವಾಗಿ ಹಣ ಸಂಪಾದಿಸಲು ಗರ್ಭಪಾತ ನಡೆಸುತ್ತಿದ್ದರು ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ವಸತಿಗೃಹದಲ್ಲಿ ಪೊಲೀಸರು ಮಹಜರು ನಡೆಸಿದ್ದು, ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...