ಬೆಂಗಳೂರು : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ( Karnataka) ಆಗಮಿಸಲಿದೆ.
ಬರ ಸಮೀಕ್ಷೆ ನಡೆಸಲು ಇಂದು ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ ಆಗಮಿಸಲಿದ್ದು, 12 ಜಿಲ್ಲೆಗಳಲ್ಲಿ ಬರ ಸಮೀಕ್ಷೆ ನಡೆಸಲಿವೆ. ಸಮೀಕ್ಷೆಗೂ ಮುನ್ನ ಕೇಂದ್ರ ತಂಡಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.45ಕ್ಕೆ ವಿಧಾನಸೌಧದಲ್ಲಿ ಈ ಸಭೆ ನಡೆಯಲಿದೆ.
ಇಂದಿನಿಂದ ಅ.9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಒಟ್ಟು 12 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ ಎನ್ನಲಾಗಿದೆ.