ಗದಗ: ಬಳಿ ಸಿಡಿಲು ಬಡಿದು ಒಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಯಾವಗಲ್ ಸಮೀಪ ನಡೆದಿದೆ.
ಮಳೆ ಬಂದಾಗ ಮರದ ಕೆಳಗೆ ನಿಂತಿದ್ದ ವೇಳೆಯಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ 52 ವರ್ಷದ ಅಶೋಕ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳು ಈರಯ್ಯನನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಪವಿತ್ರಾ ಮತ್ತು ಪುತ್ರ ಶಿವಕುಮಾರ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ದೇವರ ದರ್ಶನಕ್ಕೆ ಬಂದಿದ್ದರು. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.