ಗದಗ: ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕಡಕೋಳದಲ್ಲಿ ನಡೆದಿದೆ.
ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ಶಿರಹಟ್ಟಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗದಗ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ಕಡಕೋಳದಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.