ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.
ಏಕನಾಥ ವಾಗಮೂಡೆ(55), ಸತೀಶ ಶಳಕೆ(40) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರೂ ವಾಡಿ ಪಟ್ಟಣದ ರೈಲ್ವೆ ಕಾಲೋನಿ ನಿವಾಸಿಗಳಾಗಿದ್ದಾರೆ. ಮಳೆ ಬಂದ ಹಿನ್ನೆಲೆ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.