alex Certify ಒಂದು ಕುಟುಂಬಕ್ಕೆ ಒಂದೇ ಟಿಕೆಟ್: ಕಾಂಗ್ರೆಸ್ ಗೆ ಇದೆಯಾ ಧೈರ್ಯ ತೋರುವ ತಾಕತ್..? ಬಿಜೆಪಿ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದು ಕುಟುಂಬಕ್ಕೆ ಒಂದೇ ಟಿಕೆಟ್: ಕಾಂಗ್ರೆಸ್ ಗೆ ಇದೆಯಾ ಧೈರ್ಯ ತೋರುವ ತಾಕತ್..? ಬಿಜೆಪಿ ಟಾಂಗ್

ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡುವ ಬಗ್ಗೆ ಕೇಳಿಬಂದ ಆರೋಪ, ಪ್ರತ್ಯಾರೋಪಗಳ ನಡುವೆ ಕಾಂಗ್ರೆಸ್ ಗೆ ಬಿಜೆಪಿ ಟಾಂಗ್ ಕೊಟ್ಟಿದೆ.

ಕಾಂಗ್ರೆಸ್ ಚಿಂತನಾ ಸಭೆಯಿಂದ ದೇಶಕ್ಕೆ ಲಭ್ಯವಾದ ವಿಶೇಷ ವಾರ್ತೆಯಾದರೂ ಏನು? ಬೆಳಗ್ಗೆ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬ ಪ್ರಸ್ತಾಪಿಸಿ, ಸಂಜೆಯಾಗುತ್ತಲೇ ಈ ನಿಯಮ ಗಾಂಧಿ ಕುಟುಂಬಕ್ಕೆ ಅನ್ವಯವಾಗದು ಎಂಬ ಘೋಷಣೆ ಮಾಡಲಾಗಿದೆ. ರಾತ್ರಿಯಾಗುತ್ತಲೇ, ಈ ನಿಯಮ ಗಾಂಧಿ ನಿಷ್ಠ ಕೆಲವು ಕುಟುಂಬಗಳಿಗೆ ಅನ್ವಯವಿಲ್ಲ ಎಂದು ರಾಜಿ ಮಾಡಿಕೊಳ್ಳಲಾಯಿತು ಎಂದು ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ.

ಕೆಲವು ಕುಟುಂಬಗಳಿಗೆ ಕಾಂಗ್ರೆಸ್ ನಿಯಮ ಅನ್ವಯವಾಗುವುದಿಲ್ಲ ಎಂಬ ಮಾತಿನ ಅರ್ಥವೇನು? ಯಾವುದು ಆ ಕುಟುಂಬಗಳು? ಇಡಿ ದೇಶಕ್ಕೆ ಕುಟುಂಬ ರಾಜಕಾರಣವನ್ನು ಪರಿಚಯಿಸಿದ ಕಾಂಗ್ರೆಸ್ ಪಕ್ಷಕ್ಕೆ ಈಗ ಅದನ್ನು ಪೋಷಿಸುವುದು ಅನಿವಾರ್ಯವಾಗಿದೆ. ಕಾಂಗ್ರೆಸ್ ನೀತಿಯ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದರೂ ವಂಶವಾದವನ್ನು ಮಾತ್ರ‌ ಬಿಡುವುದಿಲ್ಲ. ‘ಧೃತರಾಷ್ಟ್ರ ಮೋಹ” ಎಂಬ ಮಾತು ರಾಜಕಾರಣದಲ್ಲಿ ಸದಾ ಜೀವಂತವಾಗಿರಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಟೀಕಿಸಲಾಗಿದೆ.

ತಮ್ಮ ನಂತರ ತಮ್ಮ ಪಳಯುಳಿಕೆಗಳನ್ನೂ ಅಧಿಕಾರದಲ್ಲಿ ಪ್ರತಿಷ್ಠಾಪಿಸಬೇಕೆಂಬ ವಾಂಛೆ ಕಾಂಗ್ರೆಸ್ ರಕ್ತದಲ್ಲಿಯೇ ಇದೆ. ನೆಹರು, ಇಂದಿರಾ, ರಾಜೀವ್, ಸೋನಿಯಾ, ರಾಹುಲ್, ಪ್ರಿಯಾಂಕ ಇವೆರಲ್ಲರೂ ಇದಕ್ಕೆ ಜ್ವಲಂತ ಉದಾಹರಣೆಗಳು. ದೇಶವೇ ಬೆರಗುಗಣ್ಣಿನಿಂದ‌ ನೋಡುತ್ತಿದ್ದ ಉತ್ತರ ಪ್ರದೇಶದ ಚುನಾವಣೆಯಲ್ಲಿ ಮೋದಿ ಅವರು ಮಹತ್ವದ ನಿರ್ಧಾರ ಕೈಗೊಂಡು ವಂಶವಾದಕ್ಕೆ ಪೋಷಣೆ ನೀಡದೇ ಬಲಾಢ್ಯರ ಮಕ್ಕಳಿಗೆ ಟಿಕೆಟ್ ನಿರಾಕರಿಸಿದರು. ಈ ನಿರ್ಧಾರದಿಂದ ಪಕ್ಷಕ್ಕೆ ಸೋಲಾದರೆ ಅದರ ಹೊಣೆ ತಾವೇ ಹೊರುವುದಾಗಿ ಘೋಷಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಈ ಧೈರ್ಯ ತೋರಿಸುವ ತಾಕತ್ತಿದೆಯೇ? ಎಂದು ಪ್ರಶ್ನಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...