
ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯದ ಜನತೆಗೆ ಮುಷ್ಕರದ ಬಿಸಿ ತಟ್ಟಿದ್ದು ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.
ಈ ನಡುವೆ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿವೆ. ಮುಷ್ಕರ ಆರಂಭವಾಗುತ್ತಿದ್ದಂತೆ ಡೀಸೆಲ್ ದರ 80 ರ ರೂಪಾಯಿ ಇದೆ ಎಂದು ಹೇಳುತ್ತಿರುವ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಬದಲಿ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚುವರಿ ದರ ಇಲ್ಲದೆ ನಿಗದಿತ ದರದಲ್ಲಿ ಪ್ರಯಾಣಿಸಬಹುದು ಎಂದು ಹೇಳಿದೆ. ಆದರೆ, ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.