ಬೆಂಗಳೂರು: ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ 14 ದಿನ ಟಫ್ ರೂಲ್ಸ್ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬಹುತೇಕ ಜನ ತವರಿನ ಕಡೆಗೆ ಹೊರಟಿದ್ದಾರೆ.
ಭಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ಬೆಂಗಳೂರಿನ ವಿವಿಧ ಬಸ್ ನಿಲ್ದಾಣದಿಂದ ಊರಿನತ್ತ ಪ್ರಯಾಣ ಬೆಳೆಸಿದ್ದು, ಇದೇ ಹೊತ್ತಲ್ಲಿ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಖಾಸಗಿ ಬಸ್ ಗಳಲ್ಲಿ ಟಿಕೆಟ್ ದರವನ್ನು ಭಾರಿ ಹೆಚ್ಚಳ ಮಾಡಿದ್ದರಿಂದ ಪ್ರಯಾಣಿಕರು ಹೈರಾಣಾಗಿದ್ದಾರೆ. ಕಷ್ಟದ ಹೊತ್ತಲ್ಲಿ ಬರೆ ಎಳೆದಂತಾಗಿದೆ.
ಕೆಲವು ಖಾಸಗಿ ಬಸ್ ಗಳಲ್ಲಿ ದುಪ್ಪಟ್ಟು ದರ ವಸೂಲಿ ಮಾಡಲಾಗ್ತಿದೆ. ಸಾಮಾನ್ಯ ದಿನಗಳಿಗಿಂತ ಮೂರು ಪಟ್ಟು ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳದಿಂದ ಪ್ರಯಾಣಿಕರು ಹೈರಾಣಾಗಿದ್ದು, ಹೇಗೋ ಊರು ತಲುಪಿದರೆ ಸಾಕೆಂಬ ಧಾವಂತದಲ್ಲಿ ಇಂದೇ ಊರಿಗೆ ಹೊರಟಿದ್ದಾರೆನ್ನಲಾಗಿದೆ.