ಮಂಗಳೂರು: ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರದಲ್ಲಿ ನಡೆದಿದೆ.
ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಕೊಲೆಯಾದ ದುರ್ದೈವಿ. ಕೊಲೆ ಬಳಿಕ ಮೂವರು ಆರೋಪಿಗಳ ಪೈಕಿ ಇಬ್ಬರು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ.
ಬನ್ನೂರು ನಿವಾಸಿ ಮನೀಶ್, ಚೇತು ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ದ್ವಿಚಕ್ರವಾಹನ ಅಪಘಾತದ ಸಂದರ್ಭದಲ್ಲಿ ನಡೆದ ವಾಗ್ವಾದ, ಜಗಳವೇ ಕೊಲೆಗೆ ಕಾರಣ ಎನ್ನಲಾಗಿದೆ.
ಗಲಾಟೆ ಬಳಿಕ ಮೂವರ ಗುಂಪು ಅಕ್ಷಯ್ ನನ್ನು ಅಟ್ಟಾಡಿಸಿಕೊಂಡು ಬಂದು ಮಾಣಿ-ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್ ನಲ್ಲಿ ತಲವಾರ್ ನಿಂದ ಹೊಡೆದು ಕೊಲೆಗೈಯ್ಯಲಾಗಿತ್ತು.