ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾರೆಲ್ಲಾ ಬಳಿ ಹುಲಿ ಉಗುರು ಇದೆಯೋ ಅವರಿಗೆ ನೋಟಿಸ್ ನೀಡಿದ್ದೇವೆ ಎಂದು ಬೆಂಗಳೂರಿನಲ್ಲಿ ವನ್ಯ ಜೀವಿ ಅರಣ್ಯಾಧಿಕಾರಿ ರವೀಂದ್ರ ಹೇಳಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗೇಶ್ ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.