ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಕೇಸ್ ನಲ್ಲಿ ನಟ ದರ್ಶನ್, ನಟ ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ.ಸದ್ಯ ರಾಕ್ ಲೈನ್ ವೆಂಕಟೇಶ್ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ನಿವಾಸದಲ್ಲಿ ಕೂಡ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಅದೇ ರೀತಿ ಉಗುರು ಪೆಂಡೆಂಟ್ ಕೇಸ್ ನಟ ಜಗ್ಗೇಶ್ ಗೂ ಸಂಕಷ್ಟ ಎದುರಾಗಿದ್ದು, ನಟ ಜಗ್ಗೇಶ್ ನಿವಾಸದಲ್ಲಿ ಶೋಧ ನಡೆಸಿದ್ದಾರೆ.
ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ನಟರು ಹಾಗೂ ಸ್ವಾಮೀಜಿಗಳ ಫೋಟೋ ವೈರಲ್ ಆಗಿತ್ತು. ಇವರ ವಿರುದ್ಧವೂ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಅಲರ್ಟ್ ಆದ ಅರಣ್ಯಾಧಿಕಾರಿಗಳು ಹುಲಿ ಉಗುರು ಧರಿಸಿದ ಆರೋಪ ಕೇಳಿಬಂದ ಎಲ್ಲರಿಗೂ ನೋಟಿಸ್ ನೀಡಲು ನಿರ್ಧರಿಸಿದ್ದಾರೆ.
ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಅವರಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ.