ಬೆಂಗಳೂರು : ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ , ಎಲ್ಲರಿಗೂ ಒಂದೇ ರೀತಿ ಶಿಕ್ಷೆಯಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಹುಲಿ ಉಗುರು ಪ್ರಕರಣದಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ. ಕಾನೂನಿನಡಿ ಕ್ರಮ ತೆಗೆದುಕೊಳ್ತೇವೆಂದು ಅರಣ್ಯ ಸಚಿವರೇ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಹುಲಿ ಉಗುರು ಕೇಸ್ನಲ್ಲಿ ಹಿಂದೂಗಳ ಟಾರ್ಗೆಟ್ ಮಾಡಲಾಗ್ತಿದೆ’ ಎಂದು ಅರವಿಂದ ಬೆಲ್ಲದ್ ಆರೋಪ ಮಾಡಿದ್ದರು.
ವನ್ಯಜೀವಿಗಳ ಚರ್ಮ ಹುಲಿಯ ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದ್ದು, 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ . ವನ್ಯಜೀವಿಗಳ ಚರ್ಮ ಉಗುರು ಬಳಕೆ ಮಾಡುವುದು ನಿಷೇಧವಿದೆ. ಈ ಬಗ್ಗೆ ಕಾನೂನಿನ ಜ್ಞಾನದ ಅರಿವು ಇರುವುದಿಲ್ಲ ಹೀಗಾಗಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಸಚಿವ ಈಶ್ವರ್ ಖಂಡ್ರೆ ನಿನ್ನೆ ಹೇಳಿದ್ದರು.