
ಶಿವಮೊಗ್ಗ: ರಾಜ್ಯದಲ್ಲಿ ಹುಲಿ ಉಗುರು ವಿಚಾರ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಅರಣ್ಯ ಕಾಯ್ದೆಗೆ ವರ್ತಮಾನಕ್ಕೆ ತಕ್ಕಂತೆ ತಿದ್ದುಪಡಿ ತರಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ದೇಶದಲ್ಲಿ ಮತ್ತು ನಾಡಿನಲ್ಲಿ ಅನೇಕ ಅನುಪಯುಕ್ತ ಕಾಯ್ದೆಗಳು ಜನಮಾನಕ್ಕೆ ಬಾರದೆ ಜೀವಂತವಾಗಿವೆ. ಅವುಗಳನ್ನು ಪುನರ್ ಪರಿಶೀಲಿಸಿ ವರ್ತಮಾನಕ್ಕೆ ಅಗತ್ಯತೆಗೆ ಪೂರಕ ತಿದ್ದುಪಡಿ ಅಥವಾ ರದ್ದು ಪಡಿಸುವ ಪ್ರಯತ್ನ ಮಾಡಬೇಕೆಂದು ಕೋರಿದ್ದಾರೆ.
ಹುಲಿ ಉಗುರು ಮತ್ತು ಇತರೆ ಪ್ರಾಣಿಗಳಿಗೆ ಸಂಬಂಧಪಟ್ಟಂತೆ ಕಾನೂನುಬಾಹಿರವಾಗಿ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಇವುಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕವಾಗಿ ಸುಗ್ರೀವಾಜ್ಞೆ ಮಾಡಿ ಸಾರ್ವಜನಿಕರಿಗೆ ಕಾಲಾವಕಾಶ ನೀಡಿ ಸಂಗ್ರಹಿಸಿದ ವಸ್ತುಗಳನ್ನು ಸರ್ಕಾರಕ್ಕೆ ಹಸ್ತಾಂತರ ಮಾಡುವ ಅವಕಾಶ ಕಲ್ಪಿಸಬೇಕು. ಇದರಿಂದ ಸರ್ಕಾರಕ್ಕೂ ಸಾರ್ವಜನಿಕರಿಗೂ ಒಳ್ಳೆಯದು. ಇಲ್ಲದಿದ್ದರೆ ಅಕ್ರಮವಾಗಿ ಸಂಗ್ರಹಿಸಿದ ವಸ್ತುಗಳು ಕಾನೂನು ಕಾಯ್ದೆಗೆ ಹೆದರಿ ಕಸದ ಪಾಲಾಗುತ್ತವೆ. ಈ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ.