ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.
ಹೌದು, ಕೋರ್ಟ್ ಗೆ ಕಡತಗಳು ತಲುಪದ ಹಿನ್ನೆಲೆ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.
ಹುಲಿ ಉಗುರು ಧರಿಸಿ ಬಂಧನಕ್ಕೊಳಗಾದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನಂತರ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಉಗುರಿನ ಲಾಕೆಟ್ ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಇದೇ ಮೊದಲ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ.