
ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಪ್ರಕರಣ ಸೆಲೆಬ್ರಿಟಿಗಳು, ರಾಜಕಾರಣಿಗಳ ಮಕ್ಕಳ ಬಳಿಕ ಈಗ ಸ್ವತಃ ಅರಣ್ಯಾಧಿಕಾರಿಗಳಿಗೂ ಸಂಕಷ್ಟ ತಂದೊಡ್ಡಿದೆ. ಹುಲಿ ಉಗುರು ಧರಿಸಿದ್ದ ಕಾರಣಕ್ಕಾಗಿ ಚಿಕ್ಕಮಗಳೂರಿನ ಅರಣ್ಯಾಧಿಕಾರೊಯೊಬ್ಬರು ಅರೆಸ್ಟ್ ಆಗಿರುವ ಘಟನೆ ನಡೆದಿದೆ.
ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ದರ್ಶನ್ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು.
ಸಸ್ಪೆಂಡ್ ಆದ ಬೆನ್ನಲ್ಲೇ ಆಲ್ದೂರು ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಅವರನ್ನು ಬಂಧಿಸಿದ್ದು, ಹುಲಿ ಉಗುರು ಲಾಕೆಟ್ ಬಗ್ಗೆ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಡಿಆರ್ ಎಫ್ ಒ ದರ್ಶನ್ ವಿರುದ್ಧ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವವರು ಆಲ್ದೂರು ವಲಯ ಅರಣ್ಯಾಧಿಕಾರಿಗೆ ದೂರು ನೀಡಿದ್ದರು.