ಕಲಬುರ್ಗಿ: ಹುಲಿ ಉಗುರು ಹೊಂದಿರುವವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಹುಲಿ ಉಗುರು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಹುಲಿ ಉಗುರು, ಆನೆ ದಂತ ಸಂಗ್ರಹಣೆ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿ ಅಪರಾಧ. ಹುಲಿ ಉಗುರು, ಆನೆ ದಂತ, ಹುಲಿ ಚರ್ಮ, ಜಿಂಕೆ ಚರ್ಮ ಅಥವಾ ಇನ್ಯಾವುದೇ ಪ್ರಾಣಿಗಳ ಚರ್ಮ, ಉಗುರು, ಹಲ್ಲು ಸಂಗ್ರಹ ಅಥವಾ ಮಾರಾಟಕ್ಕೆ ಅವಕಾಶವಿಲ್ಲ. ಇವುಗಳನ್ನು ಸಂಗ್ರಹಿಸುವುದು, ಧರಿಸುವುದು ಕೂಡ ಅಪರಾಧವಾಗಿದೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಹುಲಿ ಉಗುರು ಇಟ್ಟುಕೊಂಡವರು ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸ್ಪಷ್ಟಪಡಿಸಿದರು.