
ಶಿವಮೊಗ್ಗ: ಅಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಹುಲಿಯ ಮೃತದೇಹ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.
7-8 ವರ್ಷದ ಗಂಡು ಹುಲಿಯ ಮೃತದೇಹ ನೀರಿನಲ್ಲಿ ಪತ್ತೆಯಾಗಿದೆ. ಹುಲಿ ಸಾವಿಗೆ ಕಾರಣವೇನು ಎಂಬ ಬಗ್ಗೆ ಕೂಷಂಕುಷ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆಅರನ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಕೆ ಸೂಚನೆ ನೀಡಿದ್ದಾರೆ. 10 ದಿನಗಳ ಒಳಗಾಗಿ ವಾಸ್ತವ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.