
ಶಿವಮೊಗ್ಗ: ಸಮೀಪದ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿದ್ದ ‘ವಿಜಯ್'(17) ಹೆಸರಿನ ಗಂಡು ಹುಲಿ ವಯೋ ಸಹಜ ಅನಾರೋಗ್ಯದಿಂದಾಗಿ ಮೃತಪಟ್ಟಿದೆ.
ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಹಾರ ತ್ಯಜಿಸಿತ್ತು. ಕಳೆದ ಒಂದು ತಿಂಗಳಿಂದ ಯಾವುದೇ ಚಟುವಟಿಕೆಯಿಲ್ಲದೇ ಇದ್ದ ಹುಲಿಯನ್ನ ಸಫಾರಿಯ ಹುಲಿ ಮನೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಹುಲಿ ಮೃತಪಟ್ಟಿದ್ದು, ಮೃಗಾಲಯ ನಿಯಮದಂತೆ ಅಂತ್ಯಸಂಸ್ಕಾರ ನಡೆಸಲಾಗಿದೆ.
ಹುಲಿ ವಿಜಯ್ ಸಾವಿನಿಂದ ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ಗಂಡು ಹುಲಿಗಳೇ ಇಲ್ಲದಂತಾಗಿದ್ದು, ಒಟ್ಟು ಹುಲಿಗಳ ಸಂಖ್ಯೆ 4ಕ್ಕೆ ಇಳಿಕೆಯಾಗಿದೆ. ದಶಮಿ(17), ಸೀತಾ(16), ಪೂರ್ಣಿಮಾ(12) ಹಾಗೂ ನಿವೇದಿತಾ(12) ಎಂಬ ಹೆಣ್ಣು ಹುಲಿಗಳಿವೆ.
(ಸಾಂದರ್ಭಿಕ ಚಿತ್ರ)