
ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಸೆರೆ ಹಿಡಿಯಲಾಗಿದ್ದ ಮೂರು ವರ್ಷದ ಹುಲಿ ಭದ್ರಾ ಅಭಯಾರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲೆಯ ಬೇಲೂರು ತಾಲೂಕಿನ ರಾಮದೇವರಹಳ್ಳದ ಬಳಿ ಗಂಡು ಹುಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೈಸೂರಿನಲ್ಲಿ ಸೆರೆ ಹಿಡಿಯಲಾಗಿದ್ದ ಹುಲಿಗೆ ರೇಡಿಯೋ ಕಾಲರ್ ಅಳವಡಿಸಿ ಬಳಿಕ ಚದ್ರ ಅಭಯಾರಣ್ಯಕ್ಕೆ ಬಿಡಲಾಗಿತ್ತು. ಆದರೆ ಈಗ ಬೇಲೂರು ತಾಲೂಕಿನ ರಾಮದೇವರಹಳ್ಳದ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹುಲಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.