![](https://kannadadunia.com/wp-content/uploads/2021/10/Tiger-.jpg)
ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಕೃಷಿ ಕಾರ್ಮಿಕ ಬಲಿಯಾಗಿದ್ದಾರೆ. ವಿ. ಬಾಡಗ ಗ್ರಾಮದಲ್ಲಿ ಗದ್ದೆಮನೆ ಗಣೇಶ್(29) ಮೃತಪಟ್ಟಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವಿ. ಬಾಡಗ ಗ್ರಾಮದಲ್ಲಿ ಕಾಳುಮೆಣಸು ಕೊಯ್ಲು ಮಾಡುತ್ತಿದ್ದ ವೇಳೆಯಲ್ಲಿ ಹುಲಿ ದಾಳಿ ನಡೆಸಿದೆ. ಕೃಷಿ ಕಾರ್ಮಿಕ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿ. ಬಾಡಗ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾರ್ಮಿಕ ಗಣೇಶ ಮೃತದೇಹ ಸ್ಥಳಾಂತರಕ್ಕೆ ಅವಕಾಶ ನೀಡಿಲ್ಲ. ಹುಲಿಯನ್ನು ಸೆರೆ ಹಿಡಿಯುವಂತೆ ಧರಣಿ ನಡೆಸಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಗಣೇಶ್ ಬಲಿಯಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.