ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಾಲ್ಕೆರಿ ಗ್ರಾಮದಲ್ಲಿ ನಡೆದಿದೆ.
ರಾಜು (60) ಹುಲಿ ದಾಳಿಗೆ ಸಾವನ್ನಪ್ಪಿದ ವ್ಯಕ್ತಿ. ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿಯವರಾದ ರಾಜು, ಪೊನ್ನಂಪೇಟೆ ತಾಲೂಕಿನ ನಾಲ್ಕೆರಿ ಗ್ರಾಮದಲ್ಲಿ ಪೂಣಚ್ಚ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಹುಲಿ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ರಾಜು ಸಾವನ್ನಪ್ಪಿದ್ದಾರೆ.
ನಿನ್ನೆ ಕೊಡಗಿನ ಕುಟ್ಟ ಗ್ರಾಮದಲ್ಲಿ ಬಾಲಕ ಚೇತನ್ ನನ್ನು ಕೊಂದು ಭಾಗಶ: ತಿಂದು ಹಾಕಿದ್ದ ಹುಲಿ, ಇಂದು 60 ವರ್ಷದ ವ್ಯಕ್ತಿಯ ಮೇಲೆ ದಾಳಿ ನಡೆಸಿದೆ. ಹುಲಿ ದಾಳಿಯಿಂದ ಜನರು ತೋಟಕ್ಕೆ ಹೋಗಲು ಕೂಡ ಹೆದರುವಂತಾಗಿದೆ.