
ಚಾಮರಾಜನಗರ: ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಚಿಕ್ಕಂದುವಾಡಿ ಗ್ರಾಮದಲ್ಲಿ ನಡೆದಿದೆ.
ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಕೊಳ್ಳೆಗಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.