ಬೆಂಗಳೂರು : ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಆತ್ಮಹತ್ಯೆ( Suside) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿವೇಕ್ ಕುಮಾರ್ ಎಂಬ ಯುವಕ ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ವೇಳೆ ಮೂವರು ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ನಿರ್ಧಾರ ಮಾಡಿರುವುದಾಗಿ ಹೇಳಿದ್ದಾರೆ.
ವಿವೇಕ್ ಕುಮಾರ್ ಸಾಯುವ ಮುನ್ನ ಸೆಲ್ಪಿ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದರು. ಫ್ಯಾನಿಗೆ ಹಾಕಿದ್ದ ಕುಣಿಕೆಯ ಮುಂದೆಯೇ ಉದ್ಯೋಗಿ ವಿಡಿಯೋ ಮಾಡಿದ್ದಾರೆ. ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ನಿತೇಶ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನಿಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.