ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ. ಕರ್ನಾಟಕ ಮತ್ತು ಆಂಧ್ರಪ್ರದೇಶ ಬಜೆಟ್ ಗಾತ್ರದಷ್ಟೇ ಕುಬೇರನಾದ ವೆಂಕಟೇಶ್ವರ ದೇವಸ್ಥಾನದ ಆಸ್ತಿಗೆ ಸಂಬಂಧಿಸಿದಂತೆ ಟಿಟಿಡಿ ಶ್ವೇತಪತ್ರ ಹೊರಡಿಸಿದ್ದು, ದೇವಾಲಯದ ಒಟ್ಟು ಆಸ್ತಿ ಮೌಲ್ಯ 2.26 ಲಕ್ಷ ಕೋಟಿ ರೂ ಇದೆ ಎಂದು ಘೋಷಿಸಿದೆ.
ದೇಶಾದ್ಯಂತ 960 ಕಡೆ 7123 ಎಕರೆ ಭೂಮಿ ಇದೆ. ದೇಗುಲದ ಹೆಸರಲ್ಲಿ ಬ್ಯಾಂಕುಗಳಲ್ಲಿ 15,938 ಕೋಟಿ ರೂ. ಠೇವಣಿ ಇದೆ. ತಿರುಪತಿ ತಿರುಮಲದಲ್ಲಿರುವ ಆಸ್ತಿಯ ಮೌಲ್ಯ 5,000 ಕೋಟಿ ರೂ. ವೆಂಕಟೇಶ್ವರ ಸ್ವಾಮಿ ಹೊಂದಿರುವ ಚಿನ್ನದ ದಾಸ್ತಾನು 10.25 ಟನ್ ಎಂದು ಹೇಳಲಾಗಿದೆ.